×
Ad

ಉಡುಪಿ: ​ಯಕ್ಷ ಕಲಾವಿದ ಆನಂದ ಶೆಟ್ಟಿ ನಿಧನ

Update: 2022-07-10 22:32 IST

ಉಡುಪಿ: ಬಡಗುತಿಟ್ಟಿನ ಹಿರಿಯ ವೇಷಧಾರಿಗಳಾದ ಮಜ್ಜಿಗೆಬೈಲು ಆನಂದ ಶೆಟ್ಟಿ (78)  ಕುಂದಾಪುರ ತಾಲೂಕಿನ ಯಡಾಡಿಯ  ಸ್ವಗೃಹದಲ್ಲಿ ರವಿವಾರ ರಾತ್ರಿ 7:37ಕ್ಕೆ ನಿಧನರಾದರು.

ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ  ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೆರ್ಡೂರು, ಮಾರಣಕಟ್ಟೆ, ಸಾಲಿಗ್ರಾಮ, ಗೂಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳಗಳಲ್ಲಿ ಸುಮಾರು ನಾಲ್ಕು ದಶಕಗಳ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು. ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.

ಇವರು ಪತ್ನಿ, ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News