×
Ad

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-07-11 13:07 IST

ಬೆಂಗಳೂರು, ಜುಲೈ 11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. 

ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೆರವಾಗಿಯೂ ಮಾತನಾಡಿದ್ದು,  ಮಳೆ ತಗ್ಗಿರುವುದರಿಂದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ಸ್ಥಿತಿಗತಿಯನ್ನು ಅವಲಂಬಿಸಿ ಪರಿಹಾರಕ್ಕೆ ಸೂಚನೆ ನೀಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News