×
Ad

ಬಂಟ್ವಾಳ; ನೇತ್ರಾವತಿ ನದಿಯಲ್ಲಿ ಮೊಸಳೆ !

Update: 2022-07-11 20:10 IST

ಬಂಟ್ವಾಳ, ಜು.11: ಕೆಲವು ದಿನಗಳ ಹಿಂದೆ ನೇತ್ರಾವತಿ ನದಿಯಲ್ಲಿ ಮೊಸಳೆಯ ಮರಿಯೊಂದು ಕಂಡು ಬಂದ ವೀಡಿಯೊ ವೈರಲ್ ಆದ ಬೆನ್ನಲ್ಲೆ ಸೋಮವಾರ ನದಿಯಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಕಂಡು ಬಂದ ವೀಡಿಯೊ ವೈರಲ್ ಆಗಿದೆ.

ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹೇಳಿದ ಸಂದೇಶ ಇರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಂಟ್ವಾಳ ತಾಲೂಕಿನ ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನದಿಯಲ್ಲಿ ದೊಡ್ಡ ಗಾತ್ರದ ಮೊಸಳೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಯುವಕರು ಇದರ ವೀಡಿಯೊ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ವಾರಗಳ ಹಿಂದೆ ಇದೇ ಪರಿಸರದಲ್ಲಿ ಸಣ್ಣ ಮರಿ ಮೊಸಳೆ ಕಂಡು ಬಂದ ವೀಡಿಯೊ ವೈರಲ್ ಆಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News