ಹೆಮ್ಮಾಡಿ ಗ್ರಾಪಂ ಅಧ್ಯಕ್ಷರಾಗಿ ಸುಧಾಕರ, ಉಪಾಧ್ಯಕ್ಷರಾಗಿ ಶೋಭಾ
Update: 2022-07-11 20:32 IST
ಕುಂದಾಪುರ : ಹೆಮ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶೋಭಾ ಡಿ.ಕಾಂಚನ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದಿಪ್ ಕುಮಾರ್ ಗುಡಿಬೆಟ್ಟು, ಹೆಮ್ಮಾಡಿ ಗ್ರಾಪಂ ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ನೇತ್ರಾವತಿ, ರತ್ನ, ಶಕೀಲಾ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಚುನಾವಣಾ ಅಧಿಕಾರಿಯಾಗಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಚುನಾವಣಾ ಪಕ್ರಿಯೆಯನ್ನು ನಡೆಸಿಕೊಟ್ಟರು. ಗ್ರಾಪಂ ಅಧಿಕಾರಿ ಮಂಜಯ್ಯ ಬಿಲ್ಲವ ವಂದಿಸಿದರು.