ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಟೂಲ್‍ಕಿಟ್ ಅವ್ಯವಹಾರ ಆರೋಪ: ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯೆ

Update: 2022-07-11 16:52 GMT

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮೂಲಕ ನಡೆದ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ ಎಂದು  ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

'ಮೊದಲು ರೂ. 22 ಕೋಟಿಗೆ ಕರೆಯಲಾಗಿದ್ದ ಟೆಂಡರ್ ಅನ್ನು ರದ್ದುಗೊಳಿಸಿ ಎರಡನೇ ಬಾರಿ ತೆರೆದ ಬಿಡ್‍ನಲ್ಲಿ ರೂ 15.99 ಕೋಟಿ ರೂಪಾಯಿಗಳಿಗೆ ಅಂತಿಮಗೊಳಿಸಲಾಗಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಸುಮಾರು ರೂ 5.27 ಕೋಟಿ ಉಳಿತಾಯವಾಗಿದೆ. ಟೆಂಡರ್ ಅನುಮೋದನೆ ಪಡೆದಿರುವ ಕಂಪನಿಗೆ ಆಟೋಮೊಬೈಲ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್, ಮೆಕಾನಿಕ್, ಫಿಟ್ಟರ್ ಮತ್ತು ಮೆಕ್ಯಾನಿಕಲ್ ವಲಯಗಳಿಗೆ ರೂ 15.99 ಕೋಟಿ ಮೊತ್ತದಲ್ಲಿ ಟೂಲ್ ಕಿಟ್‍ಗಳನ್ನು ಸರಬರಾಜು ಮಾಡಲು ಆದೇಶಿಸಲಾಗಿದೆ. ಈ ಪೈಕಿ ಮೂರು ವಲಯಗಳಿಗೆ ಫ್ರೀ ಡೆಸ್ ಪ್ಯಾಚ್ ಪರಿಶೀಲನೆಗೆ ಜು.14ರಂದು ದಿನಾಂಕ ನಿಗದಿಗೊಳಿಸಲಾಗಿದ್ದು, ಇದುವರೆವಿಗೂ ಯಾವುದೇ ಹಣ ಪಾವತಿಯಾಗಿಲ್ಲ' ಎಂದು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News