ಭೀಮಾ ಕೋರೆಗಾಂವ್ ಪ್ರಕರಣ: ಮಂಗಳವಾರ ವರವರ ರಾವ್ ಮನವಿ ವಿಚಾರಣೆ

Update: 2022-07-11 17:37 GMT

ಹೊಸದಿಲ್ಲಿ, ಜು. 11:  ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ವರವರ ರಾವ್ ಅವರ ಮನವಿಯ ವಿಚಾರಣೆಯನ್ನು ಮಂಗಳವಾರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿ ಶಾಶ್ವತ ವೈದ್ಯಕೀಯ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಬಾಂಬೆ ಉಚ್ಚ ನ್ಯಾಯಾಲಯ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ವರ ವರ ರಾವ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. 
ದಾಖಲೆಗಳ ಸಂಗ್ರಹವನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಅವಕಾಶ ನೀಡುವಂತೆ ಹಾಗೂ ವಿಚಾರಣೆಯನ್ನು ನಾಳೆ ನಡೆಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿ ಮಾಡಿದ ಬಳಿಕ ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮೋದಿ ನೇತೃತ್ವದ ಪೀಠ ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು. 

ವರವರ ರಾವ್ ಪರವಾಗಿ ಹಾಜರಾದ ಹಿರಿಯ ನ್ಯಾಯವಾದಿ ಆನಂದ ಗ್ರೋವರ್, ಇದಕ್ಕೆ ನಮ್ಮ ಯಾವುದೇ ಆಕ್ಷೇಪ ಇಲ್ಲ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News