×
Ad

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಕೊರೋನ ಧೃಢ

Update: 2022-07-11 23:09 IST

ಬೆಂಗಳೂರು, ಜು. 11: ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು ಎಂದು ಹೇಳಿದ್ದಾರೆ

3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News