ಕಾಪು | ಪಾಂಗಾಳ ಸೇತುವೆಯಲ್ಲಿ ಮಗುಚಿಬಿದ್ದ ಮೀನು ಸಾಗಾಟದ ಟೆಂಪೊ
Update: 2022-07-12 13:22 IST
ಕಾಪು, ಜು 12: ಹಸಿಮೀನು ಸಾಗಾಟದ ಮೀನಿನ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಇದರಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೀನಿನ ಟೆಂಪೋ ರಸ್ತೆಗೆ ಅಡ್ಡವಾಗಿ ಉರುಳಿಬಿದ್ದಿದ್ದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು, ಸ್ಥಳಕ್ಕಾಗಮಿಸಿದ ಕಾಪು ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.