ಮಧ್ಯಪ್ರದೇಶ: ಚಂಬಲ್ ನದಿಯಲ್ಲಿ ಸ್ನಾನಕ್ಕೆ ಇಳಿದ ಬಾಲಕನನ್ನು ನುಂಗಿದ ಮೊಸಳೆ

Update: 2022-07-12 12:57 GMT

ಭೋಪಾಲ್: ಮಧ್ಯಪ್ರದೇಶದ ಶಿಯೋಪುರದಲ್ಲಿ 10 ವರ್ಷದ ಬಾಲಕನನ್ನು ಮೊಸಳೆ ನುಂಗಿರುವ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಚಂಬಲ್ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಮೊಸಳೆ ಬಾಲಕನ ಮೇಲೆ ದಾಳಿ ಮಾಡಿದ್ದು, ಬಾಲಕನನ್ನು ನದಿಗೆ ಎಳೆದೊಯ್ದಿದೆ.

ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಆತನ ಕುಟುಂಬ ಹಾಗೂ ಸಂಬಂಧಿಕರೊಡನೆ ದೊಣ್ಣೆ, ಹಗ್ಗ ಹಾಗೂ ಬಲೆಯ ಸಹಾಯದಿಂದ ಮೊಸಳೆಯನ್ನು ಹಿಡಿದು ನದಿಯಿಂದ ಹೊರಗೆ ಎಳೆದಿದ್ದಾರೆ.

ಅಷ್ಟರಲ್ಲಿ ಘಟನೆಯ ಬಗ್ಗೆ ಮಾಹಿತಿ ಪಡೆದ ಅಲಿಗೇಟರ್ ವಿಭಾಗದ ತಂಡ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಎರಡೂ ತಂಡಗಳು ಮೊಸಳೆಯನ್ನು ಗ್ರಾಮಸ್ಥರ ಹಿಡಿತದಿಂದ ರಕ್ಷಿಸಲು ಯತ್ನಿಸಿದವು. ಆದರೆ, ಸಂಜೆಯವರೆಗೂ ಬಾಲಕನ ಕುಟುಂಬಸ್ಥರು ಇದಕ್ಕೆ ಒಪ್ಪಿರಲಿಲ್ಲ. 10 ವರ್ಷದ ಮಗುವಿನ ಕುಟುಂಬಸ್ಥರು ಮೊಸಳೆಯ ಹೊಟ್ಟೆಯಲ್ಲಿ ಮಗು ಜೀವಂತವಾಗಿರಬಹುದೆಂಬ ನಿರೀಕ್ಷೆಯಲ್ಲಿದ್ದರು. ಮಗುವನ್ನು ಉಗುಳಿದಾಗ ಮಾತ್ರ ಮೊಸಳೆಯನ್ನು ಬಿಡುತ್ತೇವೆ ಎಂದು ಪಟ್ಟು ಹಿಡಿದಿರುವುದಾಗಿ ವರದಿ ಆಗಿದೆ.

 “ಬಾಲಕ ಸ್ನಾನ ಮಾಡುವಾಗ ನದಿಯ ಆಳಕ್ಕೆ ಹೋಗಿದ್ದು, ಈ ವೇಳೆ ಮಗುವನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಬಲೆ ಮತ್ತು ಕೋಲುಗಳನ್ನು ಬಳಸಿ ಮೊಸಳೆಯನ್ನು ಹಿಡಿದಿದ್ದಾರೆ. ಅಲಿಗೇಟರ್ ಇಲಾಖೆ ಈ ವಿಷಯದಲ್ಲಿ ಕ್ರಮವನ್ನು ಪ್ರಾರಂಭಿಸಿದೆ.” ಎಂದು ರಘುನಾಥಪುರ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ವೀರ್ ಸಿಂಗ್ ತೋಮರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News