×
Ad

ಜು.13ರಂದು ಹಡಪದ ಅಪ್ಪಣ್ಣ ಜಯಂತಿ

Update: 2022-07-12 19:38 IST

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಜು.೧೩ರಂದು ಬೆಳಗ್ಗೆ ೧೦ ಗಂಟೆಗೆ ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರವೇಶಕ್ಕೆ ಅವಕಾಶ 
ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿಗಳು ನಡೆಯುತ್ತಿರುವ ಹಿನ್ನೆಲೆ ಯಲ್ಲಿ ೨ನೇ ಮತ್ತು ೪ನೇ ಶನಿವಾರ ಹಾಗೂ ರವಿವಾರದಂದು ಸಹ ಬನ್ನಂಜೆಯಲ್ಲಿರುವ ಪ್ರಾದೇಶಿಕ ಕೇಂದ್ರ ಕಚೇರಿ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News