ಶ್ರೀರಂಗಪಟ್ಟಣ: ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
Update: 2022-07-12 20:32 IST
ಶ್ರೀರಂಗಪಟ್ಟಣ, ಜು.12: ಸಾಲಬಾಧೆಯಿಂದ ಯುವ ರೈತ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೂಡಲಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಗಿರೀಶ್(38) ಆತ್ಮಹತ್ಯೆ ಮಾಡಿಕೊಂಡ ಯುವ ರೈತನಾಗಿದ್ದು, ಈತ ಒಂದು ಎಕರೆ ಕೃಷಿ ಭೂಮಿಯನ್ನು ನಂಬಿ ಬದುಕು ಸಾಗಿಸುತ್ತಿದ್ದರು. ಕೃಷಿ ಚಟುವಟಿಕೆಗೆ ಬ್ಯಾಂಕ್ ನಿಂದ ಮತ್ತು ಕೈಸಾಲ ಸೇರಿ 5 ಲಕ್ಷ ರೂ. ಸಾಲ ಪಡೆದಿದ್ದರು ಎಂದು ಹೇಳಲಾಗಿದೆ.
ಇತ್ತೀಚೆಗೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಇದಲ್ಲದೆ ಬೆಳೆದ ಬೆಳೆಗೆ ನ್ಯಾಯಯುತವಾಗ ದರ ಸಿಗದ ಹಿನ್ನೆಲೆಯಲ್ಲಿ ಸಾಲ ಪಾವತಿ ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಬ್ಯಾಂಕಿನಿಂದ ನೊಟೀಸ್ ಕೂಡ ಬಂದಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.