ಖಾಸಗಿ ಶಾಲೆಗೆ ನುಗ್ಗಿ ನಗದು ಕಳವು

Update: 2022-07-12 15:41 GMT

ಕೋಟ: ಸಾಸ್ತಾನ ಸೈಂಟ್ ಆಂಟನಿ ಆಂಗ್ಲ ಮಾಧ್ಯಮ ಶಾಲೆಗೆ ಜು.೧೧ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ನಗದು ಹಾಗೂ ಮೊಬೈಲ್ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಶಾಲೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಕಚೇರಿಯಲ್ಲಿರುವ ಅಲ್ಮೇರಾ ಗಳನ್ನು ಒಡೆದು ಡ್ರಾವರ್‌ನಲ್ಲಿದ್ದ ಸುಮಾರು 30 ಸಾವಿರ ರೂ. ನಗದು ಹಾಗೂ ೧೦ಸಾವಿರ ರೂ. ಮೌಲ್ಯದ ಮೊಬೈಲ್ ಕಳವು ಮಾಡಿಕೊಂಡು ಹೋಗಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News