×
Ad

ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿಯಾಗಿ ಡಾ. ಆರ್. ಸಿ. ಜಗದೀಶ್ ನೇಮಕ‌

Update: 2022-07-12 21:36 IST

ಶಿವಮೊಗ್ಗ: ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿ ಆಗಿ ಡಾ. ಆರ್. ಸಿ. ಜಗದೀಶ್ ಅವರನ್ನು ನೇಮಕ‌ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ( ಕೃಷಿ),ಎಂಸ್ಸಿ(ಕೃಷಿ) ಪದವಿ ಪಡೆದಿರುವ ಅವರು ಪ್ರಸ್ತುತ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಹಿಂದಿನ ಕುಲಪತಿ ಡಾ.ಎಂ.ಕೆ ನಾಯಕ್ ಅವರಿಂದ ತೆರವಾದ ಸ್ಥಾನಕ್ಕೆ ಡಾ.ಆರ್.ಸಿ ಜಗದೀಶ್ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News