ವಿಟ್ಲ; ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಭಸ್ಮ
Update: 2022-07-13 10:29 IST
ಬಂಟ್ವಾಳ, ಜು.13: ವಿಟ್ಲ ಕರೋಪಾಡಿಯ ಸಮ್ಮಡ್ಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಯೊಂದು ಸುಟ್ಟು ಸಂಪೂರ್ಣ ಭಸ್ಮವಾಗಿರುವ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.
ಸಮ್ಮಡ್ಕ ನಿವಾಸಿ ಉಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ತಡ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಕಿಯಿಂದ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.