ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ ರನಿಲ್ ವಿಕ್ರಮಸಿಂಘೆ

Update: 2022-07-13 07:20 GMT
Photo: twitter

ಕೊಲಂಬೊ: ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಹಂಗಾಮಿ ಅಧ್ಯಕ್ಷರಾಗಿ  ಇಂದು ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ಪ್ರತಿಭಟನೆಯ ಬಳಿಕ  ಅಧ್ಯಕ್ಷ ಗೋಟಬಯ ರಾಜಪಕ್ಸೆ ದೇಶದಿಂದ ಪಲಾಯನ ಮಾಡಿದ ಕೆಲವೇ ಗಂಟೆಗಳ ನಂತರ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ ಎಂದು ರನಿಲ್ ವಿಕ್ರಮಸಿಂಘೆ ಅವರ ಕಚೇರಿ ತಿಳಿಸಿದೆ.

ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು, ಗೋತಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದರಿಂದ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪ್ರಧಾನಿ ಕಚೇರಿಯೊಳಗೆ ಪ್ರವೇಶಿಸಲು ಪ್ರಯತ್ನಿಸಿದ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್ ಹಾಗೂ ಜಲ ಫಿರಂಗಿಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಸರ್ವಪಕ್ಷಗಳ ಸರಕಾರ ಅಧಿಕಾರಕ್ಕೆ ಬಂದ ನಂತರ ತಾನು ರಾಜೀನಾಮೆ ನೀಡುವುದಾಗಿ ವಿಕ್ರಮಸಿಂಘೆ ಈಗಾಗಲೇ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News