ಪಶ್ಚಿಮಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಜು.18ರಂದು ಮಲೆನಾಡು ಶಾಸಕರ ಸಭೆ: ಗೃಹ ಸಚಿವ ಆರಗ ಜ್ಞಾನೇಂದ್ರ

Update: 2022-07-13 11:35 GMT

ಬೆಂಗಳೂರು, ಜು.13: ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು ಜು.18ರಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕರೆದಿದ್ದಾರೆ.

ಕಳೆದವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು 56826 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು, ಎರಡು ತಿಂಗಳು ಗಡುವು ನೀಡಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಒಂದು ವೇಳೆ ಈ ಅಧಿಸೂಚನೆ ಅನು ನಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ, ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗ ಬೇಕಾಗುತ್ತದೆ. ರಾಜ್ಯ ಸರಕಾರ ಈ ಹಿಂದೆ ಡಾ.ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ ಎಂದು ಅವರು ಹೇಳಿದ್ದಾರೆ. 

ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ. ಜು.18ರಂದು ನಡೆಯುವ ಸಭೆಯಲ್ಲಿ ಅಧಿಸೂಚನೆಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು ಎಂದು ಆರಗ ಜ್ಞಾನೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News