×
Ad

ಸುಳ್ಯ : ವರುಣನ ಆರ್ಭಟ, ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮ

Update: 2022-07-13 17:07 IST

ಸುಳ್ಯ : ಭಾರೀ ಮಳೆಯಿಂದಾಗಿ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ನೆಲಸಮವಾಗಿರುವ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಮೂಡಿತ್ತು. ನಂತರ ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿ ಗೃಹ ಪ್ರವೇಶಕ್ಕೆ ಸಜ್ಜು ಮಾಡಲಾಗಿತ್ತು. ಜುಲೈ 18ರಂದು ಗೃಹಪ್ರವೇಶಕ್ಕೆ ದಿನಾಂಕ ನಿಗದಿಪಡಿಸಲಾಗಿತ್ತು. ಎಲ್ಲಾ ತಯಾರಿಯನ್ನು ಮಾಡಲಾಗಿತ್ತು. ಆದರೆ ಭಾರೀ ಮಳೆಯಿಂದ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ.

ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News