ಪ್ರವಾಸ ಮುಗಿಸಿ ಬೆಂಗಳೂರಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

Update: 2022-07-13 13:34 GMT

ಮಂಗಳೂರು: ಮಳೆ ಹಾಗೂ ಕಡಲ್ಕೊರೆತದಿಂದ ಹಾನಿಗೊಳಗಾದ ಪ್ರದೇಶಗಳ ಭೇಟಿ ಹಾಗೂ ಪರಿಶೀಲನೆಗಾಗಿ ಎರಡು ದಿನ ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಪ್ರವಾಸ ಮುಗಿಸಿ ಬುಧವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದರು.

ಅವರೊಂದಿಗೆ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಇದ್ದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ ಸೇರಿದಂತೆ ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು ಹಾಗೂ ರಾಜೇಶ್ ನಾಯ್ಕ್,   ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News