ಬೆಂಗಳೂರು: ಸ್ಪರ್ಧೆ ವೇಳೆ ಮೈಸೂರಿನ ಕಿಕ್ ಬಾಕ್ಸರ್ ಮೃತ್ಯು

Update: 2022-07-13 15:26 GMT
ನಿಖಿಲ್- ಮೃತಪಟ್ಟಿರುವ ಯುವಕ 

ಮೈಸೂರು,ಜು.13: ಬೆಂಗಳೂರಿನಲ್ಲಿ ನಡೆದ ಕಿಕ್ ಬಾಕ್ಸರ್ ಸ್ಪರ್ಧೆ ವೇಳೆ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೈಸೂರಿನ ಸುಣ್ಣದಕೇರಿಯ ಕಿಕ್ ಬಾಕ್ಸರ್ ನಿಖಿಲ್ (24) ಮೃತ ದುರ್ಧೈವಿ ಎಂದು ತಿಳಿದು ಬಂದಿದೆ.

ಈತ ಬೆಂಗಳೂರಿನಲ್ಲಿ ಕೆ. ಒನ್ ಕಿಕ್ ಬಾಕ್ಸರ್ ಆರ್ಗನೈಸೇಷನ್ ನವರು ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ತನ್ನ ಬಾಕ್ಸಿಂಗ್ ಪ್ರದರ್ಶನವನ್ನು ನೀಡುತ್ತಿದ್ದ. ಜು.10ರಂದು ರವಿವಾರ ಸ್ಪರ್ಧೆ ನೀಡುವ ವೇಳೆ ತಲೆಗೆ ಪೆಟ್ಟು ಬಿದ್ದು ಕೆಳಕ್ಕೆ ಬಿದ್ದಿದ್ದಾನೆ. ತಕ್ಷಣ ಈತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು (ಬುಧವಾರ) ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ಬಾಕ್ಸರ್ ಅಂತ್ಯ ಕ್ರಿಯೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬುಧವಾರ ಸಂಜೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News