ಉಪನ್ಯಾಸಕಿ ಮಲ್ಲಿಕಾ

Update: 2022-07-14 08:00 GMT

ಬೆಳ್ತಂಗಡಿ, ಜು.14: ಇಲ್ಲಿನ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ(40) ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ.

ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಮಲ್ಲಿಕಾರಿಗೆ ಜು.14ರಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಪಿಲಿಚಂಡಿ ಕಲ್ಲು ನಿವಾಸಿಯಾಗಿರುವ ಇವರು, ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು

ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ವರ್ಗದವರನ್ನುಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ