ಅಬ್ದುಲ್ ಸಲಾಂ ಅಡ್ಡೂರು

Update: 2022-07-14 18:14 GMT

ಮಂಗಳೂರು: ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ನ ಮಾಜಿ ಪ್ರಧಾನ ಕಾರ್ಯದರ್ಶಿ ಅಡ್ಡೂರು ನಿವಾಸಿ ಅಬ್ದುಲ್ ಸಲಾಂ (60) ಗುರುವಾರ ರಾತ್ರಿ ನಿಧನರಾದರು. ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಅವರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಅಡ್ಡೂರು ಬದ್ರಿಯಾ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಶುಕ್ರವಾರ ಜುಮಾ ನಮಾಝ್ ಮೊದಲು ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ