ಬೈಂದೂರು: ಕಾರು ಸಹಿತ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣ ಬೇಧಿಸಿದ ಪೊಲೀಸ್ ತಂಡಕ್ಕೆ 50,000 ರೂ. ಬಹುಮಾನ ಘೋಷಣೆ

Update: 2022-07-15 08:43 GMT

ಕುಂದಾಪುರ: ವ್ಯಕ್ತಿಯೊಬ್ಬರನ್ನು ಕಾರಿನ ಸಹಿತ ಸಜೀವವಾಗಿ ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇಧಿಸಿದ ಬೈಂದೂರು ಪೊಲೀಸರ ತಂಡವನ್ನು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಅಭಿನಂದಿಸಿದ್ದು, 50‌ ಸಾವಿರ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 

ಬೈಂದೂರು ಪೊಲೀಸ್ ಠಾಣೆಗೆ ಶುಕ್ರವಾರ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡರು. ಪ್ರಕರಣವನ್ನು ಕ್ಷಿಪ್ರವಾಗಿ ಭೇಧಿಸಿದ ಬೈಂದೂರು ಪೊಲೀಸರ ತಂಡಕ್ಕೆ ರೂ.50,000 ಬಹುಮಾನವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ... ಬೈಂದೂರು ಕಾರು ಸಹಿತ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣಕ್ಕೆ ಹೊಸ ತಿರುವು: ನಾಲ್ವರು ಆರೋಪಿಗಳ ಬಂಧನ

ಈ ಮಾಹಿತಿಯನ್ನು ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಳೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ಅವರು, ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣದ ಸಮಗ್ರ ತನಿಖೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು‌ ಪಿಎಸ್ಐ ಪವನ್ ನಾಯಕ್, ಗಂಗೊಳ್ಳಿ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ ಈ ಸಂದರ್ಭ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News