ಜನರಲ್ ಕೆ.ಎಸ್. ತಿಮ್ಮಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2022-07-15 17:41 IST
ಉಡುಪಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ರಾಜ್ಯದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್‌ಕೆ.ಎಸ್‌ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.