ಮನೆ ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ
Update: 2022-07-15 17:43 IST
ಉಡುಪಿ : ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಹಾಗೂ ಇತರೆ ಹಿಂದುಳಿದ ಬಡ ವರ್ಗದವರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಮನೆ ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೩೧ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.