×
Ad

2nd PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

Update: 2022-07-15 19:42 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು. 15: 2021-22ನೆ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಆಗಸ್ಟ್ 12ರಿಂದ 25ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ಆಗಸ್ಟ್ 12ರ ಬೆಳಗ್ಗೆ 10:15ರಿಂದ 1:30ರವರೆಗೆ ಕನ್ನಡ, ಅರೇಬಿಕ್ ಭಾಷೆಗೆ ಪರೀಕ್ಷೆ ಇರಲಿದೆ. ಆ.13ಕ್ಕೆ ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಆ.16ಕ್ಕೆ ಬೆಳಗ್ಗೆ ಹಿಂದಿ, ಮಧ್ಯಾಹ್ನ 2:15ರಿಂದ 5:30ರ ವರೆಗೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಭಾಷೆಗೆ ಪರೀಕ್ಷೆ ನಡೆಯಲಿದೆ. ಆ.17ಕ್ಕೆ ಐಚ್ಛಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ.

ಆ.18ಕ್ಕೆ ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಆ.19ಕ್ಕೆ ರಾಜ್ಯಶಾಸ್ತ್ರ, ಗಣಿತಶಾಸ್ತ್ರ, ಆ.20ಕ್ಕೆ ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, ಆ.22ಕ್ಕೆ ಇಂಗ್ಲಿಷ್, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‍ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್, ಆ.23ಕ್ಕೆ ಅರ್ಥಶಾಸ್ತ್ರ, ಜೀವಶಾಸ್ತ್ರ, ಆ.24ಕ್ಕೆ ಇತಿಹಾಸ, ಸಂಖ್ಯಾಶಾಸ್ತ್ರ, ಆ.25ಕ್ಕೆ ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ವಿಷಯದ ಪರೀಕ್ಷೆ ಜರುಗಲಿದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News