×
Ad

ಮುನ್ನೆಚ್ಚರಿಕಾ ಲಸಿಕಾ ಡೋಸ್ ಪಡೆಯಲು ದ.ಕ. ಡಿಸಿ ಕರೆ

Update: 2022-07-15 21:55 IST

ಮಂಗಳೂರು : ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಕೇಂದ್ರ ಸರಕಾರ ೧೮-೫೯ ವಷರ್ದೊಳಗಿನ ಎಲ್ಲರಿಗೂ ಜು.೧೫ರಿಂದ ಸೆಪ್ಟಂಬರ್ ೩೦ರವರೆಗಿನ (೭೫ ದಿನ) ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಮುನ್ನೆಚ್ಚರಿಕಾ ಲಸಿಕಾ ಡೋಸ್‌ಗಳನ್ನು ದ.ಕ. ಜಿಲ್ಲೆಯಲ್ಲಿ ನೀಡಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ ಹಾಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಲಸಿಕಾ ಡೋಸ್‌ಗಳನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News