×
Ad

ದ.ಕ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

Update: 2022-07-15 22:05 IST

ಮಂಗಳೂರು, ಜು.೧೫: ನಗರದ ತುಳು ಭವನದಲ್ಲಿ ಜು.೨೪ರಂದು ನಡೆಯಲಿರುವ ದ.ಕ.ಜಿಲ್ಲಾ ೯ನೇ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಶ್ರೀಕೃಷ್ಣಯ್ಯ ಅನಂತಪುರ ಅವರನ್ನು ಶುಕ್ರವಾರ ಅವರ ನಿವಾಸದಲ್ಲಿ ಚುಸಾಪ ಸಮಿತಿತ ವತಿಯಿಂದ ಅಧಿಕೃತವಾಗಿ ಆಮಂತ್ರಣ ಪತ್ರಿಕೆ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.

ಚುಸಾಪ ದ.ಕ. ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಚುಸಾಪ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಆಮಂತ್ರಣ ಪತ್ರಿಕೆ ನೀಡಿದರು.  ಈ ಸಂದರ್ಭ ಶ್ರೀಕೃಷ್ಣಯ್ಯ ಅನಂತಪುರ ಅವರ ಪತ್ನಿ ಜಯಶ್ರೀ ಅನಂತಪುರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News