ಚಿತ್ರಕಲಾ ಪರಿಷತ್ತಿನಲ್ಲಿ ‘ಬೆಂಗಳೂರು ಉತ್ಸವ’
Update: 2022-07-16 00:09 IST
ಬೆಂಗಳೂರು, ಜು.15: ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದಿನಿಂದ ಆರಂಭವಾಗಿರುವ ಬೆಂಗಳೂರು ಉತ್ಸವ, ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್‍ನ ಉಪಾಧ್ಯಕ್ಷರಾದ ಪ್ರೊ.ಕೆ.ಎಸ್. ಅಪ್ಪಾಜಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಎಸ್.ಎಸ್, ಸಹಾಯಕ ಕಾರ್ಯದರ್ಶಿ ಬಿ.ಎಲ್ ಶ್ರೀನಿವಾಸ ಮತ್ತು ನಟಿಯರಾದ ಚಂದನಾ ಅನಂತಕೃಷ್ಣ ಹಾಗೂ ಅಪ್ಸರಾ ಚಾಲನೆ ನೀಡಿದರು.
80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ. ಹಾಗೇ, ಈ ಮೇಳದಲ್ಲಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು, ಮ್ಯಾಟ್, ಪಿಂಗಾಣಿ ವಸ್ತು, ಕಲಾಕೃತಿಗಳು ಸೇರಿದಂತೆ ಅನೇಕ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಿದೆ. ಈ ಮೇಳ ಜುಲೈ 15 ರಿಂದ ರಿಂದ ಜುಲೈ 24 ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.