×
Ad

ಕಡಬ: ಕಾರು - ಖಾಸಗಿ ಬಸ್‌ ನಡುವೆ ಅಪಘಾತ

Update: 2022-07-16 09:37 IST

ಕಡಬ, ಜು.16. ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ - ಕಡಬ ರಸ್ತೆಯ ಕೋಡಿಂಬಾಳದಲ್ಲಿ  ಶನಿವಾರ ಬೆಳಗ್ಗೆ ನಡೆದಿದೆ.

ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ‌ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News