ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವೀಡಿಯೊ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Update: 2022-07-16 12:53 IST
ಬೆಂಗಳೂರು: ‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವೀಡಿಯೊ ಮಾಡದಂತೆ ಹೊರಡಿಸಿದ್ದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ ಎಂದೂ ಈ ಸಂದರ್ಭ ಅವರು ಹೇಳಿದರು.
ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವೀಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು ಎಂದೂ ಸಿಎಂ ವಿವರಿಸಿದ್ದಾರೆ.