×
Ad

ಉತ್ತರಪ್ರದೇಶದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

Update: 2022-07-16 14:03 IST
Photo:PTI

ಹೊಸದಿಲ್ಲಿ: ಉತ್ತರ ಪ್ರದೇಶದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.  ಇದು ಈ ಪ್ರದೇಶದಲ್ಲಿ ಸಂಪರ್ಕ ಹಾಗೂ  ಕೈಗಾರಿಕಾ ಅಭಿವೃದ್ಧಿಯನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಸುಮಾರು  14,850 ಕೋಟಿ  ರೂ. ವೆಚ್ಚದಲ್ಲಿ 296 ಕಿ.ಮೀ ಚತುಷ್ಪಥ ಎಕ್ಸ್‌ಪ್ರೆಸ್‌ವೇ ನಿರ್ಮಿಸಲಾಗಿದೆ.

ಫೆಬ್ರವರಿ 29, 2020 ರಂದು ಪ್ರಧಾನಿಯವರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಎಕ್ಸ್‌ಪ್ರೆಸ್‌ವೇಯ ಕಾಮಗಾರಿಯು 28 ತಿಂಗಳೊಳಗೆ ಪೂರ್ಣಗೊಂಡಿದೆ.

ಎಕ್ಸ್‌ಪ್ರೆಸ್‌ವೇಯನ್ನು ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ನಿರ್ಮಿಸಲಾಗಿದೆ ನಂತರ ಆರು ಲೇನ್‌ಗಳಿಗೆ ವಿಸ್ತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News