×
Ad

ಜಲಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2022-07-16 20:58 IST

ಉಡುಪಿ, ಜು.೧೬: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮೂಲಕ ಜಲ ಸಾಹಸ ಕ್ರೀಡೆಯಲ್ಲಿ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ ಹೊಂದಿರುವ ಸ್ಪರ್ಧಾತ್ಮಕ ಸಾಹಸ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ ಹಾಗೂ ಪದಕ ವಿಜೇತರಾಗಿರುವ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ಸ್ವಯಂ ಉದ್ಯೋಗ ಹೊಂದಲು ಸಹಕಾರಿ ಯಾಗುವಂತೆ ಜಲಸಾಹಸ ಕ್ರೀಡಾ ಉಪಕರಣಗಳ ಸೌಲಭ್ಯಕ್ಕೆ ಹಾಗೂ ಜಲಸಾಹಸ ಕ್ರೀಡಾ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ ೫ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: ೦೮೨೦-೨೫೨೧೩೨೪, ಮೊ.ನಂ: ೯೪೮೦೮೮೬೪೬೭ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News