×
Ad

ವೀರೇಂದ್ರ ಹೆಗ್ಗಡೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂಧನೆ

Update: 2022-07-16 21:10 IST

ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿ ರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯ ವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜು.೧೬ರಂದು ಅಭಿನಂಧಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ್ ಕೊಡ್ಗಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾಸುವರ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News