×
Ad

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯನ್ನು ಇಂದು ಅಂತಿಮಗೊಳಿಸಲಾಗುವುದು:ಖರ್ಗೆ

Update: 2022-07-17 15:17 IST
Photo:PTI

ಹೊಸದಿಲ್ಲಿ: ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳು ಜಂಟಿ ಅಭ್ಯರ್ಥಿಯನ್ನು ಇಂದು ಅಂತಿಮಗೊಳಿಸಲಿವೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

  "1ನೇ ದಿನ, 2ನೇ ದಿನ, ಸಂಸತ್ತಿನಲ್ಲಿ ಯಾವ ವಿಷಯಗಳನ್ನು ಪ್ರಸ್ತಾಪಿಸಬೇಕು ಎಂದು ಚರ್ಚಿಸುತ್ತೇವೆ. ಎನ್‌ಡಿಎ ಸರಕಾರದ ಉಪರಾಷ್ಟ್ರಪತಿ ಅಭ್ಯರ್ಥಿ ಹೇಗಿದ್ದಾರೆ ಎಂಬುದರ ಬಗ್ಗೆ ನಾವು ಮಾತನಾಡುವ ಅಗತ್ಯವಿಲ್ಲ. ನಮ್ಮ ಅಭ್ಯರ್ಥಿಯನ್ನು ಇಂದು ನಿರ್ಧರಿಸಲಾಗುವುದು''ಎಂದು  ಲೋಕಸಭಾ ಸ್ಪೀಕರ್ ಕರೆದ ಸರ್ವಪಕ್ಷ ಸಭೆಗೂ ಮುನ್ನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಶನಿವಾರ ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತು.

ಆಗಸ್ಟ್ 6 ರಂದು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News