×
Ad

ಉಪ ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕದ ಮಾರ್ಗರೆಟ್ ಆಳ್ವಾ ಹೆಸರು ಘೋಷಣೆ

Update: 2022-07-17 17:04 IST
ಮಾರ್ಗರೆಟ್ ಆಳ್ವಾ (PTI)

ಹೊಸದಿಲ್ಲಿ: ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕದ ಮಾರ್ಗರೆಟ್ ಆಳ್ವಾ ಹೆಸರು ಘೋಷಣೆ ಮಾಡಲಾಗಿದೆ.

ಮಾಜಿ ಕೇಂದ್ರ ಸಚಿವೆ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದೆ ಆಳ್ವಾ ಅವರ ಹೆಸರನ್ನು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ರವಿವಾರ ಘೋಷಿಸಿದರು.

ಬಿಜೆಪಿ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ದನ್ಕರ್ ಅವರನ್ನು ಶನಿವಾರ ಘೋಷಿಸಿತ್ತು. 

ಮಾರ್ಗರೆಟ್ ಆಳ್ವಾ ಅವರು ರಾಜಸ್ಥಾನ ,ಗೋವಾ, ಗುಜರಾತ್ ಹಾಗೂ ಉತ್ತರಾಖಂಡ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದರು.

ಆಗಸ್ಟ್ 6 ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News