ಶಿವಮೊಗ್ಗ: ರಸ್ತೆ ಕಾಮಗಾರಿಗೆ ಆಗ್ರಹಿಸಿ ಪ್ರತಿಭಟನೆ
Update: 2022-07-17 18:05 IST
ಶಿವಮೊಗ್ಗ, ಜು.17:ವಿನೋಬನಗರ 5 ಮತ್ತು 6ನೇ ಕ್ರಾಸ್‌ನಲ್ಲಿ ರಸ್ತೆ ಕಾಮಗಾರಿ ಮಾಡಬೇಕು ಎಂದು ಆಗ್ರಹಿಸಿ ಬಡಾವಣೆ ನಿವಾಸಿಗಳು ರವಿವಾರ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು.
ರಸ್ತೆ ಕಾಮಗಾರಿಗೆ 15-20 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಇದುವರೆಗೆ ಕಾಮಗಾರಿ ಆರಂಭಿಸಿಲ್ಲ. ರಸ್ತೆಯುದ್ದಕ್ಕೂ ಹೊಂಡಗಳೇ ಇವೆ. ಮಳೆ ಬಂದರೆ ಓಡಾಡುವುದಕ್ಕೆ ಭಾರಿ ತೊಂದರೆ ಆಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲಎಂದು ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ. ಜತೆಗೆ, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ಮಳೆಗಾಲದಲ್ಲಿನೀರು ಸರಾಗಿವಾಗಿ ಹರಿದುಹೋಗದ ಕಾರಣದಿಂದ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ.
ಬಡಾವಣೆಯ ನಿವಾಸಿಗಳಾದ ಶರತ್, ಜಗದೀಶ್, ಶಿವಮೂರ್ತಿ, ರಾಮಣ್ಣ, ದಿನೇಶ್, ಪುನೀತ್ ಸೇರಿದಂತೆ 25 ಜನ ಸೇರಿ ಪ್ರತಿಭಟನೆ ನಡೆಸಿದರು.