ಆಧ್ಯಾತ್ಮಿಕ ತತ್ವಗಳಿಂದ ಸರ್ವತೋಮುಖ ಅಭಿವೃದ್ಧಿ: ಚೈತನ್ಯಾನಂದಜೀ
ಉಡುಪಿ : ಜೀವನದಲ್ಲಿ ಆಧ್ಯಾತ್ಮಿಕ ತತ್ವಗಳನ್ನು ಅಳವಡಿಸಿಕೊಂಡಲ್ಲಿ ಸರ್ವತೋಮುಖ ಅಭಿವೃದ್ಧಿಯಾಗುತ್ತದೆ. ಆದರ್ಶ ವ್ಯಕಿತಿಗಳಾದ ಶ್ರೀ ರಾಮ ಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರ ಜೀವನಶೈಲಿ ಹಾಗೂ ತತ್ವಗಳನ್ನು ಪಾಲಿಸಬೇಕು ಎಂದು ಮಂಗಳೂರು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದಜೀ ಹೇಳಿದ್ದಾರೆ.
ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾ ವಿದ್ಯಾಲಯದ ೨೩ನೇ ಶಿಷ್ಯೋಪನಯನ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಎಜ್ಯು ಕೇಶನಲ್ ಸೊಸೈಟಿಯ ನೂತನ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಅವರನ್ನು ಸನ್ಮಾನಿಸಲಾಯಿತು. ಪಂಚ ಕರ್ಮ ವಿಬಾಗದ ಸಹಪ್ರಾಧ್ಯಾಪಕ ಡಾ.ಪದ್ಮಕಿರಣ್ ಸಿ. ಅವರ ಪುಸ್ತಕ ವನ್ನು ಬಿಡುಗಡೆಗೊಳಿಸಲಾಯಿತು.
ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರವೀಂದ್ರ ಅಂಗಡಿ ಸಂದೇಶ ವಾಚನ ಮಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವೀರ ಕುಮಾರ ಕೆ. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ನಾತಕೋತ್ತರ ವಿಭಾಗದ ಉಪ ಮುಖ್ಯಸ್ಥ ಡಾ.ಸುಚೇತ ಕುಮಾರಿ, ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಚೈತ್ರಾ ಹೆಬ್ಬಾರ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಪ್ರಾಸ್ತಾವಿಕವಾಗಿ ಮಾತ ನಾಡಿ ಸ್ವಾಗತಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್. ವಂದಿಸಿದರು. ಸಂಹಿತ ಸಿದ್ಧಾಂತ ವಿಬಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಹಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.