ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪದಕ
Update: 2022-07-17 19:21 IST
ಉಡುಪಿ : ಹೈದರಬಾದಿನ ತೆಲಂಗಾಣದಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರತಿಕ್ಷ ಚಿನ್ನದ ಪದಕ ಹಾಗೂ ಐಶ್ವರ್ಯ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್., ದೈಹಿಕ ಶಿಕ್ಷಣ ಬೋಧಕ ಡಾ.ರಾಮಚಂದ್ರ ಪಾಟ್ಕರ್ ಹಾಗೂ ಬೋಧಕ, ಬೋಧಕೇತರ ವರ್ಗದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.