ರಾಜ್ಯದಲ್ಲಿ ಒಂದು ಕೋಟಿ ರಾಷ್ಟ್ರ ಧ್ವಜವನ್ನು ಹಾರಿಸಲು ಕ್ರಮ: ಸಿಎಂ ಬೊಮ್ಮಾಯಿ
ಬೆಂಗಳೂರು, ಜು. 17: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ‘ಹರ್ ಘರ್ ತಿರಂಗಾ ಕಾರ್ಯಕ್ರಮ’ವನ್ನು ಹಮ್ಮಿಕೊಂಡಿದ್ದು, ಕರ್ನಾಟಕ ರಾಜ್ಯದಲ್ಲಿ ಒಂದು ಕೋಟಿ ರಾಷ್ಟ್ರಧ್ವಜವನ್ನು ಹಾರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರವಿವಾರ ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಹಾಗೂ ಕೇಂದ್ರ ಸಂಸ್ಕೃತಿ ಸಚಿವರಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಕುರಿತ ಖಾಸಗಿ ಹೊಟೇಲ್‍ನಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಸರಕಾರಿ, ಸರಕಾರೇತರ, ಶಾಲಾ-ಕಾಲೇಜುಗಳಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿ ಅವರ ಅಡಿಯಲ್ಲಿ ಉನ್ನತ ಮಟ್ಟದ ಸಮಿತಿ ರೂಪಿಸಲಾಗಿದ್ದು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ, ಪೊಲೀಸ್ ಸೇರಿದಂತೆ ಈಗಾಗಲೇ ಹರ್ ಘರ್ ತಿರಂಗಾ ಕಾರ್ಯಕ್ರಮ ಅನುಷ್ಠಾನಕ್ಕೆ ಸಭೆಗಳು ನಡೆಯುತ್ತಿವೆ ಹಾಗೂ ರಾಜ್ಯದಲ್ಲಿ ಒಂದು ಕೋಟಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಎಲ್ಲ ಸರಕಾರಿ ಅಧಿಕಾರಿಗಳಿಗೆ ಈಗಾಗಲೇ ಸುತ್ತೋಲೆಗಳನ್ನು ನೀಡಲಾಗಿದ್ದು, ಎಲ್ಲ ಶಾಲಾ, ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮಾತ್ರವಲ್ಲದೆ, ಕರ್ನಾಟಕದಲ್ಲಿರುವ ಎನ್‍ಸಿಸಿ., ಎನ್‍ಎಸ್‍ಎಸ್ ಸ್ವಯಂ ಸೇವಕರು, ಮಾಜಿ ಸೈನಿಕರನ್ನು ಒಳಗೊಂಡಂತೆ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಹರ್ ಘರ್ ತಿರಂಗಾ ಕಾರ್ಯಕ್ರಮದ ಕುರಿತು ಎಲ್ಲ ಹಂತದಲ್ಲೂ ಅಗತ್ಯ ಮತ್ತು ವ್ಯಾಪಕ ಪ್ರಚಾರ ನೀಡುವಂತೆ ತಿಳಿಸಿದರಲ್ಲದೆ, ಆ.13ರಿಂದ15ರವರೆಗೆ ಮೂರು ದಿನಗಳ ಕಾಲ ದೇಶಾದ್ಯಂತ 20 ಕೋಟಿ ರಾಷ್ಟ್ರ್ರ ಧ್ವಜಗಳನ್ನು ಹಾರಿಸಲು ಕ್ರಮವಹಿಸಬೇಕು ಎಂದರು. ಸಂವಾದದದಲ್ಲಿ ಕೇಂದ್ರ ಸಂಸ್ಕøತಿ ಸಚಿವ ಕಿಶನ್ ರೆಡ್ಡಿ, ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್,
ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.