ಹಾವೇರಿ: ಮುಈನುಸ್ಸುನ್ನ ವಿದ್ಯಾಸಂಸ್ಥೆಯ ಘಟಿಕೋತ್ಸವ

Update: 2022-07-17 14:58 GMT

ಹಾವೇರಿ : ಸವಣೂರಿನಲ್ಲಿರುವ ಮುಈನುಸ್ಸುನ್ನ ವಿದ್ಯಾಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಇಸ್ಲಾಂ ಶಾಂತಿ ಮತ್ತು ಸೌಹಾರ್ದತೆಯ ಧರ್ಮವಾಗಿದೆ. ಸುಜ್ಞಾನದಿಂದ ನಾಡಿನಲ್ಲಿ ಶಾಂತಿ ಮತ್ತು ಮಾನವೀಯತೆಯನ್ನು ಸ್ಥಾಪಿಸಬಹುದಾಗಿದೆ ಎಂದು ಹೇಳಿದರು.

ಘಟಿಕೋತ್ಸವದಲ್ಲಿ 32 ಮಂದಿ ವಿದ್ವಾಂಸರಿಗೆ ಪದವಿ ಪ್ರದಾನ ಮಾಡಲಾಯಿತು. ಕನ್ನಡ ಸುನ್ನಿ ಸಾಹಿತ್ಯ ಮತ್ತು ಬೋಧನಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದ ಜಿ.ಎಂ. ಮುಹಮ್ಮದ್ ಕಾಮಿಲ್ ಸಖಾಫಿಗೆ ‘ಸಯ್ಯಿದ್ ಉಮರುಲ್ ಫಾರೂಕ್ ಅಲ್ ಬುಖಾರಿ ದಅ್‌ವಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಅಬ್ದುರ‌್ರಹ್ಮಾನ್ ಶಹೀರ್ ಅಲ್ ಬುಖಾರಿ ಅಧ್ಯಕ್ಷತೆ ವಹಿಸಿದ್ದರು. ಮರ್ಕಝ್ ವೈಸ್ ಚಾನ್ಸಲರ್ ಅಡ್ವಕೇಟ್ ಡಾ.ಹುಸೈನ್ ಸಖಾಫಿ ಚುಳ್ಳಿಕೋಡ್, ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್, ಮೌಲಾನ ಹಝ್ರತ್ ರಿಫಾಯಿ ಬಾಷಾ ಸಾಹೇಬ್, ಸಯ್ಯಿದ್ ಮುನೀರ್ ಅಲ್ ಅಹ್ದಲ್, ಕೆ.ಎಂ. ಮುಸ್ತಫಾ ನಈಮಿ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿಕಟ ಪೂರ್ವ ಅಧ್ಯಕ್ಷ ಮುಖ್ತಾರ್ ಹುಸೇನ್ ಫಕ್ರುದ್ದೀನ್ ಪಠಾಣ, ಎಸ್ಸೆಸ್ಸೆಫ್ ಕೋಶಾಧಿಕಾರಿ ಹಾಫಿಝ್ ಸುಫ್ಯಾನ್ ಸಖಾಫಿ, ಆದಂ ಹಝ್ರತ್ ಚಿತ್ರದುರ್ಗ ಮಾತನಾಡಿದರು.

ಸಯ್ಯಿದ್ ಅತ್ಹರ್ ಸಖಾಫಿ ಸ್ವಾಗತಿಸಿದರು. ಸಿದ್ದೀಕ್ ಸಖಾಫಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News