ತಮಿಳುನಾಡಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಇಬ್ಬರು ಶಿಕ್ಷಕಿಯರ ಬಂಧನ

Update: 2022-07-18 05:01 GMT
ಪ್ರತಿಭಟನಾಕಾರರು ರವಿವಾರ ಶಾಲಾ ಬಸ್‌ಗಳು , ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿರುವ ದೃಶ್ಯ, Photo:PTI

ಚೆನ್ನೈ: ತಮಿಳುನಾಡಿನ ಕಲ್ಲಕುರುಚಿ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಸೋಮವಾರ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ಐವರು ಶಿಕ್ಷಕರು ಹಾಗೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ತಮಿಳುನಾಡಿನ ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು  ಶಿಕ್ಷಕರ ಚಿತ್ರಹಿಂಸೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊದಲ ಶವಪರೀಕ್ಷೆಯಲ್ಲಿ ಸಾವಿಗೆ ಕಾರಣ ಹಲವು ಗಾಯಗಳು ಮತ್ತು ರಕ್ತಸ್ರಾವ ಎಂದು ತಿಳಿದುಬಂದಿದೆ.

ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಜುಲೈ 13 ರಂದು 12 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. ವಿದ್ಯಾರ್ಥಿನಿಗೆ ಶಿಕ್ಷಕಿಯೊಬ್ಬರು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸೋಮವಾರ ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಮತ್ತು ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಶಾಲೆಯ ಪ್ರಾಂಶುಪಾಲರು, ಕಾರ್ಯದರ್ಶಿ ಸೇರಿದಂತೆ ಮೂವರು ಆಡಳಿತಾಧಿಕಾರಿಗಳನ್ನು ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News