ಬೆಂಗಳೂರು: ಡಿಕೆಶಿ ಮಾಲಕತ್ವದ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

Update: 2022-07-18 08:28 GMT

ಬೆಂಗಳೂರು, ಜು18: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಲಕತ್ವದ ಆರ್.ಆರ್.ನಗರದಲ್ಲಿರುವ ನ್ಯಾಶನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ. ಆರ್.ಆರ್.ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ಸಂಜೆ ವೇಳೆ ಈ ಬೆದರಿಕೆ ಇ-ಮೇಲ್ ಬಂದಿದ್ದು, ಇಂದು ಬೆಳಗ್ಗೆ ಶಾಲೆ ಸಿಬ್ಬಂದಿ ಬಂದ ಬಳಿಕ ಇದು ಬಯಲಾಗಿದೆ.  ಸ್ಕೂಲ್​ನ ಯೂನಿಟ್ 3ಕ್ಕೆ ಇ ಮೇಲ್ ಬಂದಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಸಿಬ್ಬಂದಿಯು ಯೂನಿಟ್ 1, ಯೂನಿಟ್ 2ರಲ್ಲಿನ ಒಂದೂವರೆ ಸಾವಿರ ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ.

ಈ ನಡುವೆ ಬೆದರಿಕೆ ಕರೆಯ ವಿಚಾರ ತಿಳಿಯುತ್ತಲೇ ವಿದ್ಯಾರ್ಥಿಗಳ ಪೋಷಕರು ಶಾಲೆಯತ್ತ ಧಾವಿಸಿ ಬಂದಿದ್ದರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್ ಶಾಲೆಗೆ ಭೇಟಿ ಆತಂಕಿತ ಪೋಷಕರನ್ನು ಸಮಾಧಾನಪಡಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ವಿಚಾರವಾಗಿ ಪೊಲೀಸರು ಎಲ್ಲ ಆಯಾಮದಲ್ಲೂ ತನಿಖೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News