ರಾಯಚೂರು | ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಮೃತ್ಯು
Update: 2022-07-18 12:03 IST
ರಾಯಚೂರು, ಜು.18: ಕಾರು ಮತ್ತು ಲಾರಿಯೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟವರಾಗಿದ್ದು, ಇವರು ಮಧ್ಯ ಪ್ರದೇಶ ರಾಜ್ಯದ ಇಂಧೂರ್ ಮೂಲದವರೆಂದು ತಿಳಿದುಬಂದಿದೆ.
ಇಂಧೂರ್ ನವರಾದ ಇವರು ಕಾರಿನಲ್ಲಿ ಸಿಂಧನೂರು ರಸ್ತೆಯಾಗಿ ಹೈದರಾಬಾದ್ ಗೆ ತೆರಳುತ್ತಿದ್ದ ವೇಳೆ ಬಾಲಯ್ಯ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ. ಕಾರು ಮತ್ತು ಲಾರಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.