×
Ad

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್

Update: 2022-07-18 13:22 IST
Photo:PTI

ಹೊಸದಿಲ್ಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸಂಪುಟದ ಸಚಿವರಾದ ರಾಜನಾಥ್ ಸಿಂಗ್ ಹಾಗೂ  ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ  ಈ ವೇಳೆ ಹಾಜರಿದ್ದರು.

ರಾಜಸ್ಥಾನದಲ್ಲಿ ಬಿಜೆಪಿಯೊಂದಿಗೆ ಸುದೀರ್ಘ ನಂಟು ಹೊಂದಿದ್ದ ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಧಂಖರ್(71 ವರ್ಷ)  ವಿರುದ್ಧ ಆಗಸ್ಟ್ 6 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ (77 ವರ್ಷ) ಅವರನ್ನು ವಿರೋಧ ಪಕ್ಷವು ಕಣಕ್ಕಿಳಿಸಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಪ್ರಸ್ತುತ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ. ಮಾಜಿ ಬಿಜೆಪಿ ಅಧ್ಯಕ್ಷ ಹಾಗೂ  ಕೇಂದ್ರ ಸಚಿವರಾದ ನಾಯ್ಡು ಅವರು 2017 ರಲ್ಲಿ ಸುಲಭವಾಗಿ ಗೆದ್ದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News