ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಟೀಕೆ: ಪ್ರಕರಣ ವಜಾಗೊಳಿಸಲು ಹೈಕೋರ್ಟ್ ನಿರಾಕರಣೆ

Update: 2022-07-18 12:22 GMT

ಅಲಹಾಬಾದ್:‌ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಅಶ್ವನಿ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ರಾಜೇಂದ್ರ ಕುಮಾರ್ ಅವರನ್ನೊಳಗೊಂಡ ಪೀಠವು ಮುಮ್ತಾಜ್ ಮನ್ಸೂರಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.  "ಈ ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನ ವಾಕ್ ಸ್ವಾತಂತ್ರ್ಯವನ್ನು ಗುರುತಿಸುತ್ತದೆಯಾದರೂ, ಪ್ರಧಾನ ಮಂತ್ರಿ, ಭಾರತ ಸರ್ಕಾರದ ಇತರ ಮಂತ್ರಿಗಳು ಅಥವಾ ಯಾವುದೇ ನಾಗರಿಕರ ವಿರುದ್ಧ  ನಿಂದನೆ ಅಥವಾ ಅವಹೇಳನಕಾರಿ ಹೇಳಿಕೆಗಳಿಗೆ ಆ ಹಕ್ಕು ವಿಸ್ತರಿಸುವುದಿಲ್ಲ” ಎಂದು ನ್ಯಾಯಪೀಠವು ಹೇಳಿದೆ.

ಜಾನ್‌ಪುರ್ ಜಿಲ್ಲೆಯ ಮೀರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವ ಅಥವಾ ರವಾನಿಸುವ ಶಿಕ್ಷೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣದ ಪ್ರಕಾರ, ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪ್ರಧಾನಿ, ಗೃಹ ಸಚಿವರು ಮತ್ತು ಇತರ ಕೇಂದ್ರ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News