ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ವಿರೋಧ; ಮೂರು ಜಿಲ್ಲೆಗಳ ಬಂದ್‍ಗೆ ವಿವಿಧ ಸಂಘಟನೆಗಳಿಂದ ನಿರ್ಧಾರ

Update: 2022-07-18 15:53 GMT

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಹಾಸನ, ಕೊಡಗು ಚಿಕ್ಕಮಗಳೂರು ಬಂದ್ ಕರೆ ನೀಡುವ ಕುರಿತು ಕಾಫಿ ಬೆಳೆಗಾರರ ಸಂಘ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು  ಮುಳ್ಳಯ್ಯನಗಿರಿ ಅರಣ್ಯ ಯೋಜನೆ ವಿರೋಧಿ ಹೋರಾಟ ಸಮಿತಿ ಸಂಚಾಲಕ ಎಸ್.ವಿಜಯ್‍ಕುಮಾರ್ ತಿಳಿಸಿದ್ದಾರೆ. 

'ಜು.27ರಂದು ಬುಧವಾರ ಹಾಸನ ಬಂದ್, ಜು.28ರಂದು ಗುರುವಾರ ಕೊಡಗು, ಜು.29ರಂದು ಚಿಕ್ಕಮಗಳೂರು ಬಂದ್ ಕರೆ ನೀಡುವ ಬಗ್ಗೆ  ತೀರ್ನಾನಿಸಲಾಗಿದೆ' ಎಂದು ಮಾಹಿತಿ ನೀಡಿದರು. 

'ಪ್ರತೀ ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಗ್ರಾಮ ಪಂಚಾಯತ್‍ಗಳಿಗೆ ಮನವಿ ಸಲ್ಲಿಸುವುದು ಮತ್ತು ಕೇಂದ್ರ ಪರಿಸರ ಇಲಾಖೆಗೆ ಮನವಿ ಸಲ್ಲಿಸಲಾಗುವುದು. ಸಂಬಂಧಪಟ್ಟ ಎಲ್ಲಾ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಿ ಸಮಸ್ಯೆಯನ್ನು ವಿವರಿಸಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು.  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ವರದಿ ಅನುಷ್ಠಾನದಿಂದ ಆಗುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಕೇಂದ್ರ ಪರಿಸರ ಇಲಾಖೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದು ಮತ್ತು ಸರ್ವ ಪಕ್ಷಗಳ ಮುಖಂಡರಿಂದ ಆಕ್ಷೇಪಣೆ ಸಲ್ಲಿಸುವಂತೆ ಕೋರಲಾಗುವುದು' ಎಂದರು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News