ಗುಜರಾತ್‌ ಗಲಭೆ ಪ್ರಕರಣ: ಎಸ್‌ಐಟಿ ದಾಖಲಿಸಿರುವ ಪ್ರಕರಣಗಳನ್ನು ನಿರಾಕರಿಸಿದ ತೀಸ್ತಾ ಸೆಟಲ್ವಾಡ್‌

Update: 2022-07-19 07:16 GMT

ಹೊಸದಿಲ್ಲಿ: ಅಹಮದಾಬಾದ್‌ನ ಸ್ಥಳೀಯ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್‌ ರಿಂದ ಯಾವುದೇ ಹಣವನ್ನು ಸ್ವೀಕರಿಸಿರುವುದನ್ನು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡಿ ಕಟುವಾಗಿ ನಿರಾಕರಿಸಿದ್ದಾರೆ ಎಂದು thehindu.com ವರದಿ ಮಾಡಿದೆ.

2002 ರ ಗಲಭೆ ಪ್ರಕರಣಗಳಿಗೆ ಸಂಬಂಧಿಸಿ ನಕಲಿ ಮತ್ತು ಸುಳ್ಳು ಸಾಕ್ಷ್ಯಾಧಾರಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಜರಾತ್ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಂದ ಯಾವುದೇ ಹಣವನ್ನು ಪಡೆದಿಲ್ಲ ಎಂದು ಕಟುವಾಗಿ ನಿರಾಕರಿಸಿದರು.

ಅಂದಿನ ಗುಜರಾತ್ ಸರ್ಕಾರವನ್ನು ಅಸ್ಥಿರಗೊಳಿಸಲು ಅಥವಾ ರಾಜ್ಯದಲ್ಲಿ 2002 ರ ಕೋಮುಗಲಭೆಗಳ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಹೋರಾಡುತ್ತಿರುವಾಗ ಯಾವುದೇ ಜನರನ್ನು ಬಂಧಿಸಲು ಪ್ರಯತ್ನಿಸುವ ಯಾವುದೇ "ಪಿತೂರಿ" ಯ ಭಾಗವಾಗಿರುವ ಆರೋಪವನ್ನು ಅವರು ತಿರಸ್ಕರಿಸಿದ್ದಾರೆ.

ಅಹಮದಾಬಾದ್‌ನ ಸ್ಥಳೀಯ ನ್ಯಾಯಾಲಯದಲ್ಲಿ ಅವರ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಹೊರಿಸಿದ ಎಲ್ಲಾ ಆರೋಪಗಳನ್ನು ನಿರಾಕರಿಸಿ ತೀಸ್ತಾ ಪರ ವಕೀಲರು ವಾದ ಮಂಡಿಸಿದರು.


ನ್ಯಾಯಾಲಯವು ವಿಚಾರಣೆಯನ್ನು ಜುಲೈ 20 ಕ್ಕೆ ಮುಂದೂಡಿದೆ.

ಪ್ರಕರಣದ ಮತ್ತೊಬ್ಬ ಆರೋಪಿ, ಮಾಜಿ ಐಪಿಎಸ್ ಅಧಿಕಾರಿ ಆರ್.ಬಿ.ಶ್ರೀಕುಮಾರ್ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ತಮ್ಮ ವಿರುದ್ಧ ಹೊರಿಸಿರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News