‌ಪ್ರವಾದಿ ಅವಹೇಳನ ಪ್ರಕರಣ: ನೂಪುರ್‌ ಶರ್ಮಾ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ

Update: 2022-07-19 10:15 GMT

ಹೊಸದಿಲ್ಲಿ: ಪ್ರವಾದಿ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಬಂಧನಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ. ತನ್ನ ವಿರುದ್ಧದ ಎಲ್ಲಾ ಒಂಬತ್ತು ಎಫ್‌ಐಆರ್‌ಗಳನ್ನು ಒಟ್ಟು ಸೇರಿಸಲು ನೂಪುರ್ ಶರ್ಮಾ ಮಾಡಿದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 10 ರಂದು ಕೈಗೆತ್ತಿಕೊಳ್ಳಲಿದೆ. ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಲಾಗಿದೆ.

ದಿಲ್ಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂ ರಾಜ್ಯಗಳನ್ನು ಆಕೆಯ ಮನವಿಗೆ ಉತ್ತರಿಸುವಂತೆ ಕೇಳಲಾಗಿದೆ.

ನೂಪುರ್ ಶರ್ಮಾ ಪರ ವಕೀಲರು ಇಂದು ಸುಪ್ರೀಂ ಕೋರ್ಟ್‌ಗೆ "ನೂಪುರ್‌ ಶರ್ಮಾ ತಮ್ಮ ಪ್ರಾಣಕ್ಕೆ ಹೆಚ್ಚಿನ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಬೇರೆ ಯಾವುದೇ ಕಾನೂನು ಆಶ್ರಯವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News