ಮದರಸಾಗಳಿಗೆ ಪತ್ಯೇಕ ಪಠ್ಯಕ್ರಮವಿಲ್ಲ: ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

Update: 2022-07-19 15:33 GMT
ಬಿ.ಸಿ. ನಾಗೇಶ್- ಶಿಕ್ಷಣ ಸಚಿವರು 

ಬೆಂಗಳೂರು, ಜು.19: ಉತ್ತರಪ್ರದೇಶದಲ್ಲಿ ಅಲ್ಲಿನ ಸರಕಾರ ಮದರಸಾಗಳಿಗೆ ಪ್ರತ್ಯೇಕ ಪಠ್ಯಕ್ರಮವನ್ನು ರೂಪಿಸುತ್ತಿದೆ. ಆದರೆ ರಾಜ್ಯದಲ್ಲಿರುವ ಮದರಸಾಗಳಿಗೆ ಪ್ರತ್ಯೇಕ ಪಠ್ಯಕ್ರಮವನ್ನು ರೂಪಿಸುವ ಬಗ್ಗೆ ಕರ್ನಾಟಕ ರಾಜ್ಯ ಸರಕಾರ ಚರ್ಚೆ ನಡೆಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. 

ಮಂಗಳವಾರ ಪ್ರೆಸ್‍ಕ್ಲಬ್ ಆವರಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಸಾಮಾನ್ಯ ಶಾಲೆಗಳಲ್ಲಿ ಕಲಿಸುವಂತಹ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ಮತ್ತಿತರ ವಿಷಯಗಳ ಕಲಿಕೆಗೆ ಆಸಕ್ತಿ ತೋರಿಸುತ್ತಿದ್ದಾರೆ. ಪೋಷಕರೂ ಅದನ್ನೇ ಹೇಳುತ್ತಿದ್ದಾರೆ. ಇದರಿಂದ ಅವರು ಮಕ್ಕಳನ್ನು ಸಾಮಾನ್ಯ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಪರಿಣಾಮವಾಗಿ ಉರ್ದು ಶಾಲೆಗಳಲ್ಲಿ ಹಾಜರಾತಿ ಗಣನೀಯವಾಗಿ ಇಳಿಕೆ ಆಗಿದೆ ಎಂದರು.

ಆ.9 ರಿಂದ 17ರವರೆಗೆ ರಾಷ್ಟ್ರ ಧ್ವಜಾರೋಹಣವು ಮದರಸಾಗಳಿಗೂ ಅನ್ವಯ ಆಗಲಿದೆ. ಮದರಸಾಗಳು ದೇಶದೆಲ್ಲೆಡೆ ಇವೆ. ರಾಜ್ಯದ ಮದರಸಾಗಳ ಮೇಲೆಯೂ ಧ್ವಜ ಹಾರಾಡಲಿದೆ. ಇದಕ್ಕೆ ಸಮುದಾಯದ ಮುಖಂಡರ ಒಪ್ಪಿಗೆಯೂ ಇದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News