ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ಪ್ರಕರಣ: ನೋಟಿಸ್ ಜಾರಿಗೊಳಿಸಿದ ಲೋಕಾಯುಕ್ತ

Update: 2022-07-19 15:38 GMT

ಬೆಂಗಳೂರು, ಜು.19: ಇತ್ತೀಚಿಗೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ಕರ್ನಾಟಕ ಲೋಕಾಯುಕ್ತ ನೋಟಿಸ್ ಜಾರಿಗೊಳಿಸಿದ್ದು, ಸ್ಪಷ್ಟನೆ ನೀಡುವಂತೆ ಸೂಚಿಸಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ರಿಜಿಸ್ಟ್ರಾರ್, ಸಬ್ ರಿಜಿಸ್ಟ್ರಾರ್ ಗಳಿಗೆ ಸ್ಪಷ್ಟನೆ ನೀಡುವಂತೆ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ನೋಟಿಸ್‍ನಲ್ಲಿ ಉಲ್ಲೇಖ ಮಾಡಿದ್ದಾರೆ.

ಜೂ.22ರಂದು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರ ನೇತೃತ್ವದಲ್ಲಿ ಎಸ್ಪಿ ತಂಡ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗೆ ಒಳಪಡುವ 43 ಉಪನೋಂದಣಿ ಕಚೇರಿಗಳ ಮೇಲೆ ಏಕಕಾಲಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. 

ದಾಳಿ ಸಂದರ್ಭದಲ್ಲಿ ಕಚೇರಿಗಳ ಕೆಲಸ ಅವಧಿಯಲ್ಲಿ ಸಿಬ್ಬಂದಿ ಗುರುತಿನ ಚೀಟಿ ಧರಿಸದಿರುವುದು, ಹಾಜರಾತಿ ಪುಸ್ತಕಕ್ಕೆ ಸಹಿ ಹಾಕದಿರುವುದು, ಶುಲ್ಕವಾಗಿ ಪಡೆದ ಹಣದ ಬಗ್ಗೆ ಸೂಕ್ತ ಲೆಕ್ಕಪತ್ರ ಇಲ್ಲದಿರುವುದು ಕಂಡುಬಂದಿದೆ. ಕಚೇರಿಗಳಲ್ಲಿ ಸಿಸಿಸಿವಿ ಅಳವಡಿಕೆಗೆ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳ ಬಗ್ಗೆ ಉಲ್ಲೇಖಿಸಿರುವ ಲೋಕಾಯುಕ್ತರು ಸಂಬಂಧಿಸಿದ ಅಧಿಕಾರಿಗಳಿಗೆ ಸೆ.9ರೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News